1
|
ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು. ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು. |
2
|
ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ. |
3
|
ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪ್ರಶ್ನಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ. |
4
|
ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ. |
5
|
ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ. |
6
|
ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, ನೀನು ನನಗೆ ಉತ್ತರಿಸಿದೆ. ಆದ್ದರಿಂದ ಈಗಲೂ ನನಗೆ ಕಿವಿಗೊಡು. |
7
|
ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು. |
8
|
ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಆಡಗಿಸಿಕೊ. |
9
|
ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡು ಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು. |
10
|
ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬ ಕೊಚ್ಚಿಕೊಳ್ಳುತ್ತಾರೆ. |
11
|
ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ. |
12
|
ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ. |
13
|
ಯೆಹೋವನೇ, ಎದ್ದೇಳು; ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು. |
14
|
ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು. |
15
|
ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. |
Psalms 17:5 Kannada Language Bible Words basic statistical display
COMING SOON ...