1
|
ರಚನೆಗಾರ : ದಾವೀದ ನನ್ನ ಬಲವಾಗಿರುವ ಯೆಹೋವನೇ, “ನಿನ್ನನ್ನೇ ಪ್ರೀತಿಸುವೆನು!” |
2
|
ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾ ಬಲವೂ ನನ್ನ ದುರ್ಗವೂ ಆಗಿದ್ದಾನೆ. |
3
|
ಯೆಹೋವನಿಗೆ ಸ್ತೋತ್ರವಾಗಲಿ! ನಾನು ಆತನಿಗೆ ಮೊರೆಯಿಟ್ಟಾಗ ನನ್ನನ್ನು ವೈರಿಗಳಿಂದ ರಕ್ಷಿಸಿದನು. |
4
|
ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು. |
5
|
ಪಾತಾಳದ ಹಗ್ಗಗಳು ನನ್ನನ್ನು ಬಿಗಿದುಕೊಂಡಿದ್ದವು. ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. |
6
|
ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು. |
7
|
ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ಮಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು. |
8
|
ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು. |
9
|
ಆತನು ಆಕಾಶವನ್ನು ಹರಿದು ಕೆಳಗಿಳಿದು ಬಂದನು. ಆತನು ದಟ್ಟವಾದ ಕಪ್ಪುಮೋಡದ ಮೇಲೆ ನಿಂತುಕೊಂಡನು. |
10
|
ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು. |
11
|
ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ ಆತನು ಮರೆಯಾದನು. |
12
|
ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು. |
13
|
ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು. ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು. |
14
|
ಆತನು ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿ ಬಿಟ್ಟನು; ಸಿಡಿಲು ಮಿಂಚುಗಳಿಂದ ಅವರನ್ನು ಕಳವಳಗೊಳಿಸಿದನು. |
15
|
ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು. |
16
|
ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು. |
17
|
ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತಲೂ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು. |
18
|
ನಾನು ನನ್ನ ಕಷ್ಟದಲ್ಲಿದ್ದಾಗ ಅವರು ನನ್ನ ಮೇಲೆ ಆಕ್ರಮಣ ಮಾಡಲು, ಯೆಹೋವನು ನನಗೆ ಸಹಾಯಕನಾಗಿ ಬಂದನು. |
19
|
ಆತನು ನನ್ನನ್ನು ಪ್ರೀತಿಸುವುದರಿಂದ ನನ್ನನ್ನು ರಕ್ಷಿಸಿದನು; ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದುಕೊಂಡು ಬಂದನು. |
20
|
ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು. |
21
|
ಯಾಕಂದರೆ ನಾನು ಯೆಹೋವನಿಗೆ ವಿಧೇಯನಾಗಿದ್ದೆನು; ನನ್ನ ದೇವರ ವಿರೋಧನಾಗಿ ನಾನು ಪಾಪಮಾಡಲಿಲ್ಲ. |
22
|
ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಯಾವಾಗಲೂ ಜ್ಞಾಪಿಸಿಕೊಳ್ಳುವೆ. |
23
|
ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು. ಪಾಪದಲ್ಲಿ ಬೀಳದಂತೆ ಎಚ್ಚರಿಕೆಯಾಗಿದ್ದೆನು. |
24
|
ಯೆಹೋವನ ದೃಷ್ಟಿಯಲ್ಲಿ ನಾನು ನೀತಿವಂತನೂ ನಿರಪರಾಧಿಯೂ ಆಗಿರುವುದರಿಂದ ಆತನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು. |
25
|
ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. ನಿನಗೆ ನಂಬಿಗಸ್ತರಾಗಿರುವವರಿಗೆ ನೀನೂ ನಂಬಿಗಸ್ತನಾಗಿರುವೆ. |
26
|
ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; ದುಷ್ಟರಿಗಾದರೊ ಶತ್ರುವಾಗಿರುವೆ. |
27
|
ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ. ಗರ್ವಿಷ್ಠರಿಗಾದರೊ ಅವಮಾನ ಮಾಡುವೆ. |
28
|
ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು. |
29
|
ಯೆಹೋವನೇ, ನಿನ್ನ ಸಹಾಯದಿಂದ ನಾನು ಸೈನಿಕರೊಡನೆ ಓಡಬಲ್ಲೆ. ನನ್ನ ದೇವರ ಸಹಾಯದಿಂದ ನಾನು ಶತ್ರುಗಳ ಕೋಟೆಗಳನ್ನು ಹತ್ತುವೆನು. |
30
|
ದೇವರ ಮಾರ್ಗಗಳು ನಿಷ್ಕಳಂಕವಾಗಿವೆ; ಯೆಹೋವನ ಮಾತುಗಳು ಸತ್ಯವಾಗಿವೆ. ಆತನು ತನ್ನಲ್ಲಿ ಭರವಸೆಯಿಟ್ಟಿರುವವರನ್ನು ಸಂರಕ್ಷಿಸುವನು. |
31
|
ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ. |
32
|
ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು. |
33
|
ಆತನು ನನ್ನ ಪಾದಗಳನ್ನು ಜಿಂಕೆಯಂತೆ ವೇಗಗೊಳಿಸುವನು. ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು. |
34
|
ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು. ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ. |
35
|
ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ. |
36
|
ದೇವರೇ, ನಾನು ಮುಗ್ಗರಿಸದೆ ನಡೆಯಲು ನನ್ನ ಕಾಲುಗಳನ್ನೂ ಹರಡುಗಳನ್ನೂ ಬಲಗೊಳಿಸು; |
37
|
ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ. ಅವರನ್ನು ನಾಶಮಾಡುವ ತನಕ ನಾನು ಹಿಂತಿರುಗಿ ಬರುವುದಿಲ್ಲ. |
38
|
ನಾನು ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಏಳಲಾರದಂತೆ ಮಾಡುವೆನು; ನನ್ನ ಶತ್ರುಗಳು ನನ್ನ ಪಾದಗಳ ಕೆಳಗೇ ಇರುವರು. |
39
|
ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ. |
40
|
ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು ನೀನು ನನಗೆ ಅವಕಾಶನೀಡಿದೆ. |
41
|
ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೋಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ. |
42
|
ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು. |
43
|
ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. ನನಗೆ ಗೊತ್ತಿಲ್ಲದವರೂ ನನ್ನ ಸೇಮಾಡುವರು. |
44
|
ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು. |
45
|
ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ ತಮ್ಮ ಕೋಟೆಗಳಿಂದ ಬರುವರು. |
46
|
ಯೋಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ. |
47
|
ದೇವರು ನನ್ನ ವೈರಿಗಳನ್ನು ದಂಡಿಸಿ ಅವರನ್ನು ನನಗೆ ಅಧೀನ ಪಡಿಸಿದ್ದಾನೆ. |
48
|
ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ, ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ. |
49
|
ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು. |
50
|
ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನೂ ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು. |
Psalms 18:47 Kannada Language Bible Words basic statistical display
COMING SOON ...