Indian Language Bible Word Collections
Psalms 2:2
Psalms Chapters
Psalms 2 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 2 Verses
1
ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?
2
ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.
3
“ದೇವರಿಗೂ ಆತನು ಅಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.
4
ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ಪರಿಹಾಸ್ಯಮಾಡುವನು.
5
(5-6) “ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.
7
ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
8
ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
9
ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.
10
ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.
11
ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ, ನಡುಗುತ್ತಾ ಉಲ್ಲಾಸಪಡಿರಿ.
12
ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!