1
|
ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ. |
2
|
ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. ಚೀಯೋನಿನಿಂದ ನಿನಗೆ ಆಧಾರ ನೀಡಲಿ. |
3
|
ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ. |
4
|
ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ. |
5
|
ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. ಆತನ ಹೆಸರನ್ನು ಕೊಂಡಾಡೋಣ. ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ. |
6
|
ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು. |
7
|
ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಿಸವಿಡುವರು. ನಾವಾದರೊ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು. |
8
|
ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು! |
9
|
ಯಾಕಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು. |
Psalms 20:6 Kannada Language Bible Words basic statistical display
COMING SOON ...