Bible Languages

Indian Language Bible Word Collections

Bible Versions

Books

Psalms Chapters

Psalms 21 Verses

Bible Versions

Books

Psalms Chapters

Psalms 21 Verses

1 ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು.
2 ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ.
3 ನೀನು ರಾಜನನ್ನು ಬಹಳವಾಗಿ ಅಶೀರ್ವದಿಸಿರುವೆ. ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.
4 ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವತವನ್ನು ಅನುಗ್ರಹಿಸಿದೆ.
5 ನೀನು ರಾಜನಿಗೆ ಜಯವನ್ನು ದೊರಕಿಸಿ ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.
6 ನೀನು ರಾಜನಿಗೆ ಶಾಶ್ವತವಾದ ಆಶೀರ್ವಾದವನ್ನು ಕೊಟ್ಟಿರುವೆ. ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡುವನು.
7 ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.
8 ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.
9 ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.
10 ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ; ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ.
11 ಯಾಕಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.
12 ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು.
13 ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.

Psalms 21:1 Kannada Language Bible Words basic statistical display

COMING SOON ...

×

Alert

×