1
|
ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ? |
2
|
ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು. |
3
|
ದೇವರೇ, ಪರಿಶುದ್ಧನು ನೀನೇ. ನೀನು ರಾಜನಂತೆ ಕುಳಿತಿರುವೆ. ಇಸ್ರೇಲರ ಸ್ತುತಿಗಳೇ ನಿನ್ನ ಸಿಂಹಾಸನ. |
4
|
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು. ನೀನು ಅವರನ್ನು ರಕ್ಷಿಸಿದೆ. |
5
|
ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ. |
6
|
ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ. ಅವರು ನನ್ನನ್ನು ತಿರಸ್ಕರಿಸುತ್ತಾರೆ. |
7
|
ನನ್ನನ್ನು ನೋಡಿದವರೆಲ್ಲರೂ ಗೇಲಿಮಾಡುವರು. ಅವರು ಓರೆ ತುಟಿಮಾಡಿ ತಲೆಯಾಡಿಸುತ್ತಾ, |
8
|
“ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎನ್ನುತ್ತಾರೆ. |
9
|
ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ. |
10
|
ಹುಟ್ಟಿದ ದಿನದಿಂದಲೂ ನೀನೇ ನನ್ನ ದೇವರಾಗಿರುವೆ. ತಾಯಿಯ ಗರ್ಭದಿಂದ ಬಂದಂದಿನಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. |
11
|
ಹೀಗಿರಲು, ನನ್ನನ್ನು ತೊರೆಯಬೇಡ! ಆಪತ್ತು ಸಮೀಪಿಸಿದೆ. ನನಗೆ ಸಹಾಯಮಾಡಲು ಯಾರೂ ಇಲ್ಲ. |
12
|
ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ. |
13
|
ಪ್ರಾಣಿಯೊಂದನ್ನು ಸೀಳಿಹಾಕುತ್ತಾ ಗರ್ಜಿಸುವ ಸಿಂಹದಂತೆ ಅವರ ಬಾಯಿಗಳು ಅಗಲವಾಗಿ ತೆರೆದಿವೆ. |
14
|
ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ಮೂಳೆಗಳು ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ. |
15
|
ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ. |
16
|
ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. |
17
|
ನನ್ನ ಮೂಳೆಗಳು ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ! |
18
|
ಅವರು ನನ್ನ ಮೇಲ್ಹೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟು ಹಾಕುವರು. |
19
|
ಯೆಹೋವನೇ, ನನ್ನನ್ನು ತೊರೆಯಬೇಡ! ನೀನೇ ನನ್ನ ಬಲ! ಬೇಗನೆ ನನಗೆ ಸಹಾಯಮಾಡು! |
20
|
ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು. |
21
|
ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು. |
22
|
ನಿನ್ನ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು. |
23
|
ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ. ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ. |
24
|
ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ. |
25
|
ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಯಜ್ಞಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. |
26
|
ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯಗಳು ಯಾವಾಗಲೂ ಸಂತೋಷವಾಗಿರಲಿ! |
27
|
ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ. |
28
|
ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು. |
29
|
ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತು ಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು. |
30
|
ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು. |
31
|
ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು. |
Psalms 22:1 Kannada Language Bible Words basic statistical display
COMING SOON ...