1
|
ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ. |
2
|
ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು. |
3
|
ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿ ಮಾರ್ಗದಲ್ಲಿ ನನ್ನನ್ನು ನಡೆಸುವನು. |
4
|
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ. |
5
|
ವೈರಿಗಳ ಎದುರಿನಲ್ಲಿ ನೀನು ನನಗೆ ಜೌತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ. |
6
|
ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು. |
Psalms 23:1 Kannada Language Bible Words basic statistical display
COMING SOON ...