1
|
ಯೆಹೋವನೇ, ನಿನ್ನಲ್ಲೇ ಮನಸ್ಸಿಟ್ಟಿದ್ದೇನೆ. |
2
|
ನನ್ನ ದೇವರೇ, ನಿನ್ನಲ್ಲಿ ಭರವಿಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ! |
3
|
ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ ದ್ರೋಹಿಗಳಾದರೊ ನಿರಾಶರಾಗುವರು. ಅವರಿಗೆ ಏನೂ ದೊರೆಯುವುದಿಲ್ಲ. |
4
|
ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ತಿಳಿಸು. ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. |
5
|
ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು. ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ. |
6
|
ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು. |
7
|
ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ. |
8
|
ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು. |
9
|
ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು. |
10
|
ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ. |
11
|
ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟಿ. |
12
|
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು. |
13
|
ಅವನು ಸುಖದಿಂದಿರುವನು. ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು. |
14
|
ಯೆಹೋವನು ತನಗೆ ವಿಧೇಯರಾಗಿರುವವರಿಗೆ ಅಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು. |
15
|
ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು. |
16
|
ಯೆಹೋವನೇ, ನಾನು ಬಾಧೆಪಡುವವನೂ ಒಬ್ಬಂಟಿಗನೂ ಆಗಿದ್ದೇನೆ. ನನಗೆ ಅಭಿಮುಖನಾಗಿ ಕರುಣೆತೋರು. |
17
|
ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. ನನ್ನ ಸಮಸ್ಯೆಗಳನ್ನು ಪರಿಹರಿಸು. |
18
|
ಯೆಹೋವನೇ, ನನ್ನ ಸಂಕಟವನ್ನೂ ತೊಂದರೆಗಳನ್ನೂ ನೋಡು. ನನ್ನ ಪಾಪಗಳನ್ನೆಲ್ಲ ಕ್ಷಮಿಸು. |
19
|
ನನ್ನ ವೈರಿಗಳನ್ನೆಲ್ಲ ದೃಷ್ಟಿಸಿನೋಡು. ಅವರು ನನ್ನನ್ನು ದ್ವೇಷಿಸುತ್ತಾ ಕೇಡುಮಾಡಬೇಕೆಂದಿದ್ದಾರೆ. |
20
|
ದೇವರೇ, ನನ್ನನ್ನು ಕಾಪಾಡು, ನನ್ನನ್ನು ರಕ್ಷಿಸು. ನಾನು ನಿನ್ನಲ್ಲಿ ಭರವಸವಿಟ್ಟಿರುವುದರಿಂದ ನನ್ನನನು ನಿರಾಶೆಗೊಳಿಸಬೇಡ. |
21
|
ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು. |
22
|
ದೇವರೇ, ಇಸ್ರೇಲರನ್ನು ವೈರಿಗಳಿಂದ ತಪ್ಪಿಸಿ ಕಾಪಾಡು. |
Psalms 25:19 Kannada Language Bible Words basic statistical display
COMING SOON ...