Bible Languages

Indian Language Bible Word Collections

Bible Versions

Books

Psalms Chapters

Psalms 26 Verses

Bible Versions

Books

Psalms Chapters

Psalms 26 Verses

1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು. ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೋಹೋವನಲ್ಲಿಯೇ ಭರವಸವಿಟ್ಟಿದ್ದೆನು.
2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.
3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.
4 ಆಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. ನಾನು ಕಪಟಿಗಳ ಜೊತೆ ಸೇರುವವನಲ್ಲ.
5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ.
6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.
7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.
8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾ ಗುಡಾರವೂ ನನಗೆ ಎಷ್ಟೋ ಪ್ರಿಯವಾಗಿದೆ.
9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ.
10 ಅವರು ಜನರನ್ನು ವಂಚಿಸುವರು; ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು.
11 ನಾನಾದರೊ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.
12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.

Psalms 26:1 Kannada Language Bible Words basic statistical display

COMING SOON ...

×

Alert

×