1
|
ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು. |
2
|
ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು. |
3
|
ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ. |
4
|
ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು. |
5
|
ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶ ಮಾಡುವನು. |
6
|
ಯೆಹೋವನಿಗೆ ಸ್ತೋತ್ರವಾಗಲಿ! ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. |
7
|
ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು. |
8
|
ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ. |
9
|
ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು. |
Psalms 28:5 Kannada Language Bible Words basic statistical display
COMING SOON ...