1
|
ರಚನೆಗಾರ: ದಾವೀದ. “ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ. |
2
|
ಅನೇಕರು ನನ್ನ ಬಗ್ಗೆ ಮಾತಾಡುತ್ತಾ “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ. |
3
|
ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು. |
4
|
ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು. |
5
|
ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು. |
6
|
ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ. |
7
|
ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ. |
8
|
ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು. |
Psalms 3:1 Kannada Language Bible Words basic statistical display
COMING SOON ...