1
|
ರಚನೆಗಾರ : ದಾವೀದ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು. |
2
|
ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ. |
3
|
ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ. |
4
|
ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು. |
5
|
ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು. ಅವರಿಗೆ ಆಶಾಭಂಗವಾಗದು. |
6
|
ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು. |
7
|
ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು. |
8
|
ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು. |
9
|
ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ. |
10
|
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು. |
11
|
ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು. |
12
|
ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ? |
13
|
ಹಾಗಾದರೆ ಕೆಟ್ಟದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ. |
14
|
ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ. |
15
|
ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು. |
16
|
ಕೆಡುಕರಿಗಾದರೊ ಯೆಹೋವನು ವಿರೋಧವಾಗಿರುವನು. ಆತನು ಅವರನ್ನು ಸಂಪೂರ್ಣವಾಗಿ ನಾಶಮಾಡುವನು. |
17
|
ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ರಕ್ಷಿಸುವನು. |
18
|
ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು. |
19
|
ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು. |
20
|
ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ. |
21
|
ದುಷ್ಟರಾದರೊ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು. |
22
|
ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ. |
Psalms 34:8 Kannada Language Bible Words basic statistical display
COMING SOON ...