1
|
ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು. |
2
|
ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಪಮೆಯನ್ನು ಕೇಳುವುದೂ ಇಲ್ಲ. |
3
|
ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ. |
4
|
ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು. |
5
|
ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ. |
6
|
ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ. |
7
|
ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು. |
8
|
ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು. |
9
|
ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ. |
10
|
ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು. |
11
|
ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ. |
12
|
“ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” ಎಂದು ಅವರ ಸಮಾಧಿಯ ಮೇಲೆ ಬರೆಯಿಸು. |
Psalms 36:1 Kannada Language Bible Words basic statistical display
COMING SOON ...