1
|
ರಚನೆಗಾರ : ದಾವೀದ. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ. |
2
|
ನಿನ್ನಿಂದ ನನಗೆ ನೋವಾಗಿದೆ. ನಿನ್ನ ಬಾಣಗಳು ನನಗೆ ನಾಟಿಕೊಂಡಿವೆ. |
3
|
ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ. ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ. |
4
|
ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ. |
5
|
ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು. ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ. |
6
|
ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ. |
7
|
ನನಗೆ ಜ್ವರವಿದೆ, ನನ್ನ ಇಡೀ ದೇಹ ನೋಯುತ್ತಿದೆ. |
8
|
ನನಗೆ ಬಹಳ ನೋವಿರುವುದರಿಂದ ಜೋಮು ಹಿಡಿದಂತಿದೆ. ಹೃದಯದ ವೇದನೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. |
9
|
ನನ್ನ ಒಡೆಯನೇ, ನೀನು ನನ್ನ ನರಳಾಟವನ್ನು ಕೇಳಿರುವೆ. ನನ್ನ ನಿಟ್ಟುಸಿರುಗಳು ನಿನಗೆ ಮರೆಯಾಗಿಲ್ಲ. |
10
|
ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ. |
11
|
ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ. |
12
|
ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ. |
13
|
ಆದರೆ ನಾನು ಕಿವುಡನಂತೆ ಕೇಳದವನಾಗಿದ್ದೇನೆ. ಮೂಕನಂತೆ ಮಾತಾಡದವನಾಗಿದ್ದೇನೆ. |
14
|
ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. |
15
|
ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ನನ್ನ ಒಡೆಯನಾದ ದೇವರೇ, ನನಗೆ ಉತ್ತರನೀಡು. |
16
|
ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು. ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು. |
17
|
ನಾನು ಅಪರಾಧಿಯೆಂದು ನನಗೆ ಗೊತ್ತಿದೆ; ನನ್ನ ನೋವನ್ನು ಮರೆಯಲಾರೆ. |
18
|
ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ. |
19
|
ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ. ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು. |
20
|
ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ. |
21
|
ಯೆಹೋವನೇ, ನನ್ನನ್ನು ಕೈಬಿಡಬೇಡ! ನನ್ನ ದೇವರೇ, ನನ್ನ ಸಮೀಪದಲ್ಲೇ ಇರು! |
22
|
ಯೆಹೋವನೇ, ನನ್ನ ರಕ್ಷಕನೇ, ಬೇಗನೆ ಬಂದು ನನಗೆ ಸಹಾಯಮಾಡು! |
Psalms 38:1 Kannada Language Bible Words basic statistical display
COMING SOON ...