ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ [*ನಾಶನದ ಗುಂಡಿಯೊಳಗಿಂದ “ಶಿಯೊಲ್”ಗೆ ಮತ್ತೊಂದು ಹೆಸರು “ಮರಣದ ಸ್ಥಳ.”] ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ [†ಕೆಸರಿನ ಸ್ಥಳದಿಂದ ಅನೇಕ ಪುರಾತನ ಕಥೆಗಳಲ್ಲಿ ಮರಣದ ಸ್ಥಳವಾದ ಶಿಯೊಲ್ ಸುತ್ತಲೆಲ್ಲಾ ಕೆಸರಿನಿಂದ ಕೂಡಿರುವ ಕತ್ತಲಾದ ಸ್ಥಳವೆಂದು ಹೇಳಲಾಗಿದೆ. ಸಾಮಾನ್ಯವಾಗಿ ಸತ್ತಜನರನ್ನು ನೆಲದೊಳಗೆ ಹೂಳುವುದೇ ಇದಕ್ಕೆ ಕಾರಣ.] ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.
ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.
ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.
ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.