1
|
ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೊ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. |
2
|
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ. |
3
|
ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು! |
4
|
ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ. |
5
|
ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದು ಹೋಗುತ್ತದೆ” ಎಂದು ಹೇಳುತ್ತಿದ್ದಾರೆ. |
6
|
ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು; ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು. |
7
|
ನನ್ನ ವೈರಿಗಳು ನನಗೆ ವಿರೋಧವಾಗಿ ಗುಟ್ಟಾಗಿ ಮಾತಾಡಿಕೊಳ್ಳುವರು; ನನಗೆ ಕೇಡು ಮಾಡಲು ಆಲೋಚಿಸುವರು. |
8
|
“ಅವನು ಯಾವುದೊ ತಪ್ಪು ಮಾಡಿರುವುದರಿಂದ ಅವನಿಗೆ ಕಾಯಿಲೆ ಬಂದಿದೆ, ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ. |
9
|
ನನ್ನ ಆಪ್ತಸ್ನೇಹಿತನೊಂದಿಗೆ ಊಟ ಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ. |
10
|
ಯೆಹೋವನೇ, ದಯವಿಟ್ಟು ನನಗೆ ದಯೆತೋರು; ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು. |
11
|
ನನಗೆ ಕೇಡು ಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು. |
12
|
ನಿರಪರಾಧಿಯಾದ ನನಗೆ ಸಹಾಯಮಾಡು. ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು. |
13
|
ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಅಮೆನ್! |
Psalms 41:13 Kannada Language Bible Words basic statistical display
COMING SOON ...