Bible Languages

Indian Language Bible Word Collections

Bible Versions

Books

Psalms Chapters

Psalms 43 Verses

Bible Versions

Books

Psalms Chapters

Psalms 43 Verses

1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.
2 ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?
3 ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ.
4 ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.
5 ನಾನು ಬಹು ವ್ಯಸನದಿಂದಿರುವುದೇಕೆ? ನಾನು ಬಹು ಗಲಿಬಿಲಿಗೊಂಡಿರುವುದೇಕೆ? ನಾನು ದೇವರನ್ನೇ ನಿರೀಕ್ಷಿಸುವೆನು. ಆತನೇ ನನಗೆ ರಕ್ಷಕನೂ ದೇವರೂ ಆಗಿರುವುದರಿಂದ ಅತನನ್ನು ಸ್ತುತಿಸುತ್ತಲೇ ಇರುವೆನು.

Psalms 43:1 Kannada Language Bible Words basic statistical display

COMING SOON ...

×

Alert

×