1
|
ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು. |
2
|
ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ. |
3
|
ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು. |
4
|
ನನ್ನ ದೇವರೇ, ನೀನೇ ನನ್ನ ರಾಜನು. ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು. |
5
|
ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು. ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು. |
6
|
ನನ್ನ ಬಿಲ್ಲುಬಾಣಗಳಲ್ಲಿ ನಾನು ಭರವಸೆವಿಡುವುದಿಲ್ಲ. ನನ್ನ ಖಡ್ಗವು ನನ್ನನ್ನು ರಕ್ಷಿಸಲಾರದು. |
7
|
ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ. |
8
|
ದಿನವೆಲ್ಲಾ ದೇವರನ್ನು ಕೊಂಡಾಡಿದೆವು. ನಿನ್ನ ಹೆಸರನ್ನು ಸದಾಕಾಲ ಸ್ತುತಿಸುವೆವು. |
9
|
ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ. |
10
|
ನಮ್ಮ ವೈರಿಗಳು ನಮ್ಮನ್ನು ಹಿಂದಟ್ಟುವಂತೆ ಮಾಡಿದೆ. ನಮ್ಮ ವೈರಿಗಳು ನಮ್ಮ ಐಶ್ವರ್ಯವನ್ನು ತೆಗೆದುಕೊಂಡರು. |
11
|
ಕೊಯ್ಯಲ್ಪಡುವ ಕುರಿಗಳೊ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ. |
12
|
ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ. |
13
|
ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ. |
14
|
ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ. |
15
|
ನಾಚಿಕೆಯು ನನ್ನನ್ನು ಕವಿದುಕೊಂಡಿದೆ. ಅವಮಾನವು ದಿವವೆಲ್ಲಾ ನನ್ನೆದುರಿನಲ್ಲೇ ಇದೆ. |
16
|
ನನ್ನ ವೈರಿಗಳ ಮತ್ತು ದೂಷಕರ ನಿಂದೆಯ ಮಾತುಗಳು ನನ್ನೆದುರಿನಲ್ಲಿ ಇವೆ. |
17
|
ನಾವು ನಿನ್ನನ್ನು ಮರೆತಿಲ್ಲದಿದ್ದರೂ ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ. |
18
|
ನಾವು ನಿನಗೆ ವಿಮುಖರಾಗದೆ ನಿನ್ನನ್ನೇ ಹಿಂಬಾಲಿಸಿದೆವು. |
19
|
ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದು ಬಿಟ್ಟಿರುವೆ. |
20
|
ನಮ್ಮ ದೇವರ ಹೆಸರನ್ನು ನಾವು ಮರೆತುಬಿಟ್ಟೆವೋ? ಅನ್ಯದೇವರುಗಳಿಗೆ ನಾವು ಪ್ರಾರ್ಥಿಸಿದೆವೋ? ಇಲ್ಲ! |
21
|
ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು. |
22
|
ದಿನವೆಲ್ಲಾ ನಾವು ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಗುರಿಗಳಂತೆ ಪರಿಗಣಿಸಲ್ಪಟ್ಟಿದ್ದೇವೆ. |
23
|
ನನ್ನ ಒಡೆಯನೇ ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ. |
24
|
ನೀನು ನಮಗೆ ಮರೆಯಾಗಿರುವುದೇಕೆ? ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತು ಬಿಟ್ಟಿರುವೆಯಾ? |
25
|
ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ. |
26
|
ಎದ್ದು ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು. |
Psalms 44:12 Kannada Language Bible Words basic statistical display
COMING SOON ...