English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Psalms Chapters

Psalms 45 Verses

1 ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ.
2 ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.
3 ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.
4 ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.
5 ನಿನ್ನ ಬಾಣಗಳು ತೀಕ್ಷ್ಣವಾಗಿವೆ. ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ; ಶತ್ರುಗಳು ನಿನ್ನ ಕಣ್ಣೆದುರಿನಲ್ಲೇ ನೆಲಕ್ಕುರುಳುವರು.
6 ದೇವರೇ, [*ದೇವರೇ ದೇವರನ್ನು ರಾಜನಂತೆ ವರ್ಣಿಸಿರುವ ಹಾಡು ಎಂಬ ಅರ್ಥವನ್ನು ಇದು ಕೊಡಬಹುದು, ಅಥವಾ ಇಲ್ಲಿ ಲೇಖಕನು “ದೇವರು” ಎಂಬ ಪದವನ್ನು ರಾಜನಿಗೆ ಶಿರೋನಾಮೆಯಾಗಿ ಉಪಯೋಗಿಸಿರಬಹದು.] ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.
7 ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ. [†ನಿನ್ನ ಸ್ನೇಹಿತರಿಗೆ … ಆರಿಸಿಕೊಂಡಿದ್ದಾನೆ ಅಕ್ಷರಶಃ, “ನಿನ್ನ ಮೇಲೆ ಮತ್ತು ನಿನ್ನ ಸ್ನೇಹಿತರ ಮೇಲೆ ಆನಂದ ತೈಲವನ್ನು ಸುರಿದಿದ್ದಾನೆ.” ರಾಜರನ್ನು, ಯಾಜಕರನ್ನು, ಮತ್ತು ಪ್ರವಾದಿಗಳನ್ನು ಅಭಿಷೇಕಿಸುವದಕ್ಕಾಗಿ ವಿಶೇಷವಾದ ಈ ತೈಲವನ್ನು ದೇವಾಲಯದಲ್ಲಿ ಇಟ್ಟಿರುತ್ತಿದ್ದರು.]
8 ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.
9 ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.
10 ರಾಣಿಯೇ, ನನಗೆ ಕಿವಿಗೊಡು. ಸೂಕ್ಷ್ಮವಾಗಿ ಗಮನಿಸಿ ಅರ್ಥಮಾಡಿಕೊ. ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.
11 ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು. [‡ಗೌರವಿಸಬೇಕು ಅಕ್ಷರಶಃ “ಅವನಿಗೆ ತಲೆಬಾಗಬೇಕು.”]
12 ತೂರ್ ಪಟ್ಟಣದ ಶ್ರೀಮಂತರು ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು.
13 ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
14 ಆಕೆಯು ಕಸೂತಿ ರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು ತನ್ನ ಸಖಿಯರಾದ ಕನ್ಯಾಪರಿವಾರದೊಡನೆ ರಾಜನ ಬಳಿಗೆ ಬರುವಳು.
15 ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ರಾಜನ ಅರಮನೆಯೊಳಕ್ಕೆ ಪ್ರವೇಶಿಸುವರು.
16 ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತ ಮಾಡುವರು; ನೀನು ಅವರನ್ನು ನಿನ್ನ ದೇಶದಲ್ಲೆಲ್ಲಾ ಅಧಿಪತಿಗಳನ್ನಾಗಿ ನೇಮಿಸುವೆ.
17 ನಾನು ನಿನ್ನ ಹೆಸರನ್ನು ಯಾವಾಗಲೂ ಪ್ರಖ್ಯಾತಿಪಡಿಸುವೆನು; ಜನಾಂಗಗಳು ನಿನ್ನನ್ನು ಸದಾಕಾಲ ಕೊಂಡಾಡುವರು.
×

Alert

×