1
|
ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು. |
2
|
ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ. |
3
|
ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ. |
4
|
ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ. |
5
|
ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು. |
6
|
ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು. |
7
|
ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ. |
8
|
ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ. |
9
|
ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದು ಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು. |
10
|
ದೇವರು ಇಂತೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!” |
11
|
ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. |
Psalms 46:11 Kannada Language Bible Words basic statistical display
COMING SOON ...