1
|
ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು. |
2
|
ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಆದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ. |
3
|
ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ. |
4
|
ಒಮ್ಮೆ, ಕೆಲವು ರಾಜರು ಒಟ್ಟಾಗಿ ಸೇರಿಬಂದರು. ಆ ಪಟ್ಟಣದ ಮೇಲೆ ಧಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು. |
5
|
ಆದರೆ ಅವರು ಅದನ್ನು ಕಂಡಾಗ ದಿಗ್ಭ್ರಮೆಗೊಂಡರು; ಭಯದಿಂದ ಓಡಿಹೋದರು. |
6
|
ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು. |
7
|
ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ ನೀನು ಅವರನ್ನು ನಾಶಮಾಡಿದೆ. |
8
|
ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು. |
9
|
ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು. |
10
|
ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. |
11
|
ನಿನ್ನ ನ್ಯಾಯನಿರ್ಣಯಗಳಿಂದ ಸಿಯೋನ್ ಪರ್ವತವು ಹರ್ಷಿಸಲಿ; ಯೆಹೂದರ ಊರುಗಳು ಉಲ್ಲಾಸಿಸಲಿ. |
12
|
ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. ಅದರ ಬುರುಜುಗಳನ್ನು ಎಣಿಸಿರಿ. |
13
|
ಅದರ ಕೋಟೆಗಳನ್ನು ನೋಡಿರಿ. ಚೀಯೋನಿನ ಅರಮನೆಗಳನ್ನು ಹೊಗಳಿರಿ. ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ. |
14
|
ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ! |
Psalms 48:6 Kannada Language Bible Words basic statistical display
COMING SOON ...