1
|
ಸರ್ವಜನಾಂಗಗಳೇ, ಕೇಳಿರಿ, ಭೂನಿವಾಸಿಗಳಿರಾ, ಆಲಿಸಿರಿ. |
2
|
ಸಾಮಾನ್ಯರೇ, ಅಧಿಪತಿಗಳೇ, ಬಡವರೇ, ಶ್ರೀಮಂತರೇ, ನೀವೆಲ್ಲರೂ ಒಂದಾಗಿ ಬಂದು ಕೇಳಿರಿ. |
3
|
ನಾನು ನಿಮಗೆ ಸುಜ್ಞಾನವನ್ನೂ ವಿವೇಕವನ್ನೂ ಬೋಧಿಸುವೆನು. |
4
|
ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು. |
5
|
ಆಪತ್ತು ಬಂದಾಗ ನಾನೇಕೆ ಭಯಪಡಬೇಕು? ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು? |
6
|
ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆ ಇಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ. |
7
|
ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು. |
8
|
ಸ್ವಂತ ಪ್ರಾಣವನ್ನು ಖರೀದಿಸಲು ಬೇಕಾಗುವಷ್ಟು ಹಣ ಯಾವನಿಗೂ ದೊರೆಯವುದಿಲ್ಲ. |
9
|
ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು. |
10
|
ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು. |
11
|
ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ. |
12
|
ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು. ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು. |
13
|
ತಮ್ಮ ಐಶ್ವರ್ಯವನ್ನು ಮೆಚ್ಚಿಕೊಂಡಿರುವ ಬುದ್ಧಿಹೀನರಿಗೆ ಇದೇ ಗತಿ. |
14
|
ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು. |
15
|
ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು. |
16
|
ಜನರು ಐಶ್ವರ್ಯವಂತರಾಗಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. ಜನರು ಭವ್ಯವಾದ ಮನೆಗಳಲ್ಲಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. |
17
|
ಅವರು ಸಾಯುವಾಗ ತಮ್ಮೊಂದಿಗೆ ಏನನ್ನೂ ತೆಗೆದುಕೊಂಡು ಹೋಗಲಾರರು. ಅವರ ವೈಭವವು ಅವರೊಂದಿಗೆ ಹೋಗಲಾರದು. |
18
|
ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ |
19
|
ಸತ್ತು ತನ್ನ ಪೂರ್ವಕರ ಬಳಿ ಸೇರುವ ಕಾಲ ಅವನಿಗೆ ಬಂದೇ ಬರುವುದು. ಅವನು ಹಗಲಿನ ಬೆಳಕನ್ನು ಮತ್ತೆಂದಿಗೂ ನೋಡಲಾರ. |
20
|
ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯವಂತನಾಗಿದ್ದರೂ ಪ್ರಾಣಿಗಳಂತೆಯೇ ನಾಶವಾಗುವನು. |
Psalms 49:14 Kannada Language Bible Words basic statistical display
COMING SOON ...