Indian Language Bible Word Collections
Psalms 5
Psalms Chapters
Psalms 5 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 5 Verses
1
|
ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ನನ್ನ ಆಲೋಚನೆಗಳಿಗೆ ಗಮನಕೊಡು. |
2
|
ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು. ನನ್ನ ಪ್ರಾರ್ಥನೆಯನ್ನು ಆಲೈಸು. |
3
|
ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರು ನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ. |
4
|
ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ. ನಿನ್ನ ಸನ್ನಿಧಿಯಲ್ಲಿ ದುಷ್ಟರು ಇರಲಾರರು. |
5
|
ನಿನ್ನನ್ನು ನಂಬದವರು ನಿನ್ನ ಬಳಿಗೆ ಬರಲಾರರು; ದುಷ್ಟರನ್ನು ನೀನು ದ್ವೇಷಿಸುವೆ. |
6
|
ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು. |
7
|
ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು. |
8
|
ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ, ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. |
9
|
ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ. |
10
|
0ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು. |
11
|
1ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು. |
12
|
ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ; ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ. |