Indian Language Bible Word Collections
Psalms 50:5
Psalms Chapters
Psalms 50 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 50 Verses
1
ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.
2
ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.
3
ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.
4
ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು.
5
ದೇವರು ಹೀಗೆನ್ನುವನು: “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿಬನ್ನಿರಿ” ಎಂದು ಆಜ್ಞಾಪಿಸುವನು.
6
ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.
7
ದೇವರು ಹೀಗೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!
8
ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.
9
ನಿಮ್ಮಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ.
10
ನನಗೆ ಆ ಪಶುಗಳ ಅಗತ್ಯವಿಲ್ಲ. ಕಾಡಿನಲ್ಲಿರುವ ಸರ್ವ ಮೃಗಗಳೂ ಗುಡ್ಡಗಳ ಮೇಲಿರುವ ಸಾವಿರಾರು ಪಶುಗಳೂ ನನ್ನವೇ.
11
ಅತ್ಯಂತ ಉನ್ನತವಾದ ಬೆಟ್ಟಗಳ ಮೇಲಿರುವ ಪಕ್ಷಿಗಳೆಲ್ಲಾ ನನಗೆ ಗೊತ್ತುಂಟು. ಬೆಟ್ಟಗಳ ಮೇಲೆ ಚಲಿಸುವ ಜೀವಜಂತುಗಳೆಲ್ಲಾ ನನ್ನವೇ.
12
ನನಗೆ ಹಸಿವೆಯಾಗಿದ್ದರೆ, ಆಹಾರಕ್ಕಾಗಿ ನಿಮ್ಮನ್ನು ಕೇಳಬೇಕಿಲ್ಲ. ಲೋಕವೂ ಅದರಲ್ಲಿರುವ ಸಮಸ್ತವೂ ನನ್ನದೇ.
13
ನಾನು ಹೋರಿಗಳ ಮಾಂಸವನ್ನು ತಿನ್ನುವೆನೇ? ನಾನು ಆಡುಗಳ ರಕ್ತವನ್ನು ಕುಡಿಯುವೆನೇ?”
14
ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.
15
ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”
16
ದೇವರು ದುಷ್ಟರಿಗೆ ಹೀಗೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.
17
ಹೀಗಿರಲು ನೀವು ನನ್ನ ಸುಶಿಕ್ಷಣವನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ?
18
ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.
19
ನಿಮ್ಮ ಬಾಯಿಂದ ಕೇಡನ್ನು ಕಲ್ಪಿಸುವಿರಿ. ನಿಮ್ಮ ನಾಲಿಗೆಯಿಂದ ಮೋಸವನ್ನು ನೇಯುವಿರಿ.
20
ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ.
21
ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!
22
ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!
23
ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”