1
|
ಕೀರ್ತನೆ ರಚಿಸಲ್ಪಟ್ಟಿತು. ರಚನೆಗಾರ : ದಾವೀದ. ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಹಾಕು. |
2
|
ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು! |
3
|
ನಾನು ಪಾಪಮಾಡಿದ್ದೇನೆಂದು ನನಗೆ ಗೊತ್ತಿದೆ. ಆ ಪಾಪಗಳು ನನ್ನ ಮುಂದೆಯೇ ಇವೆ. |
4
|
ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ. |
5
|
ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ. |
6
|
ದೇವರೇ, ನಾನು ನಿನಗೆ ನಂಬಿಗಸ್ತನಾಗಿರಬೇಕೆಂಬುದೇ ನಿನ್ನ ಅಪೇಕ್ಷೆ. ಆದ್ದರಿಂದ ಸುಜ್ಞಾನದ ರಹಸ್ಯಗಳನ್ನು ನನಗೆ ಉಪದೇಶಿಸು. |
7
|
ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ! |
8
|
ನನ್ನಲ್ಲಿ ಆನಂದವನ್ನೂ ಉಲ್ಲಾಸವನ್ನೂ ಬರಮಾಡು. ನೀನು ಜಜ್ಜಿಹಾಕಿದ ಮೂಳೆಗಳು ಮತ್ತೆ ಉಲ್ಲಾಸಿಸಲಿ! |
9
|
ನನ್ನ ಪಾಪಗಳನ್ನು ನೋಡಬೇಡ! ಅವುಗಳನ್ನೆಲ್ಲ ಅಳಿಸಿಬಿಡು! |
10
|
ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು. |
11
|
ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ! |
12
|
ನಿನ್ನ ರಕ್ಷಣೆಯಿಂದುಂಟಾಗುವ ಆನಂದವನ್ನು ನನಗೆ ಕೊಡು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು. |
13
|
ನಿನ್ನ ಜೀವಮಾರ್ಗವನ್ನು ನಾನು ಪಾಪಿಗಳಿಗೆ ಉಪದೇಶಿಸುವೆನು; ಆಗ ಅವರು ನಿನ್ನ ಬಳಿಗೆ ಹಿಂತಿರುಗಿ ಬರುವರು. |
14
|
ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು! |
15
|
ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು. |
16
|
ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ! |
17
|
ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆಯೂ ವಿಧೇಯತೆಯೂ ಉಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ. |
18
|
ಚೀಯೋನಿಗೆ ಕರುಣೆ ತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು. |
19
|
ಆಗ ಜನರು ಯಜ್ಞಗಳನ್ನೂ ಸರ್ವಾಂಗ ಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು. |
Psalms 51:15 Kannada Language Bible Words basic statistical display
COMING SOON ...