Bible Languages

Indian Language Bible Word Collections

Bible Versions

Books

Psalms Chapters

Psalms 52 Verses

Bible Versions

Books

Psalms Chapters

Psalms 52 Verses

1 ಕೀರ್ತನೆಯಿದು. ರಚನೆಗಾರ : ದಾವೀದ. ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೆ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.
2 ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು.
3 ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.
4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
5 ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಅತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು.
6 ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು:
7 “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”
8 ನಾನಾದರೊ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ.
9 ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.

Psalms 52:1 Kannada Language Bible Words basic statistical display

COMING SOON ...

×

Alert

×