Bible Languages

Indian Language Bible Word Collections

Bible Versions

Books

Psalms Chapters

Psalms 54 Verses

Bible Versions

Books

Psalms Chapters

Psalms 54 Verses

1 ಕೀರ್ತನೆಯಿದು. ರಚನೆಗಾರ : ದಾವೀದ. ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.
2 ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮಾತುಗಳನ್ನು ಕೇಳು.
3 ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.
4 ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು. ನನ್ನ ಒಡಯನೇ ನನಗೆ ಆಧಾರ ನೀಡುವನು.
5 ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು.
6 ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.
7 ಯಾಕಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು

Psalms 54:1 Kannada Language Bible Words basic statistical display

COMING SOON ...

×

Alert

×