Bible Languages

Indian Language Bible Word Collections

Bible Versions

Books

Psalms Chapters

Psalms 57 Verses

Bible Versions

Books

Psalms Chapters

Psalms 57 Verses

1 ರಚನೆಗಾರ : ದಾವೀದ. ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
2 ಸಹಾಯಕ್ಕಾಗಿ ಮಹೋನ್ನತನಾದ ದೇವರಿಗೆ ಮೊರೆಯಿಡುವೆನು. ಆತನು ಕೊರತೆಗಳನ್ನೆಲ್ಲಾ ನೀಗಿಸುವನು.
3 ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.
4 ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.
5 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.
6 ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.
7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ದೃಢವಾಗಿದೆ. ನಾನು ವಾದ್ಯ ಬಾರಿಸುತ್ತಾ ಹಾಡುವೆನು.
8 ನನ್ನ ಮನವೇ, ಎಚ್ಚರಗೊಳ್ಳು! ಹಾರ್ಪ್ ಮತ್ತು ಲೈರ್ ವಾದ್ಯಗಳೇ, ಎಚ್ಚರಗೊಳ್ಳಿರಿ. ಸಂ ಕೀರ್ತನೆಯಿಂದ ಸೂರ್ಯೋದಯವನ್ನು ಎದುರುಗೊಳ್ಳೋಣ.
9 ನನ್ನ ಒಡೆಯನೇ, ಜನಾಂಗಗಳ ನಡುವೆ ನಿನ್ನನ್ನು ಕೊಂಡಾಡುವೆನು. ಎಲ್ಲಾ ದೇಶಗಳಲ್ಲಿ ನಿನಗೆ ಸ್ತುತಿ ಗೀತೆಗಳನ್ನು ಹಾಡುವೆನು.
10 ಯಾಕಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ.
11 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.

Psalms 57:1 Kannada Language Bible Words basic statistical display

COMING SOON ...

×

Alert

×