1
|
ಆಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ? |
2
|
ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಆನ್ಯಾಯವನ್ನೇ. |
3
|
ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ. |
4
|
ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯಕರ. ಕಿವುಡು ನಾಗರಹಾವಿನಂತೆ ಅವರು ಸತ್ಯಕ್ಕೆ ಕಿವಿಗೊಡುವುದಿಲ್ಲ. |
5
|
ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರ ಹಾವುಗಳಂತಿರುವರು. |
6
|
ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದು ಹಾಕು. |
7
|
ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿ ಹೋಗಲಿ. |
8
|
ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ. |
9
|
ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ. |
10
|
ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು. |
11
|
ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು. |
Psalms 58:1 Kannada Language Bible Words basic statistical display
COMING SOON ...