Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Psalms Chapters

Psalms 60 Verses

1 ರಚನೆಗಾರ : ದಾವೀದ. ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಮತ್ತೆ ಪುನರ್‌ಸ್ಥಾಪಿಸು.
2 ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು.
3 ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ.
4 ನಿನ್ನ ಆರಾಧಕರನ್ನು ನೀನು ಎಚ್ಚರಿಸುವೆ. ಈಗ ಅವರು ಶತ್ರುಗಳಿಂದ ಪಾರಾಗಬಹುದು.
5 ನಿನ್ನ ಮಹಾಶಕ್ತಿಯಿಂದ ನಮ್ಮನ್ನು ರಕ್ಷಿಸು! ನನ್ನ ಪ್ರಾರ್ಥನೆಗೆ ಉತ್ತರನೀಡಿ ನಿನ್ನ ಪ್ರಿಯರನ್ನು ರಕ್ಷಿಸು!
6 ದೇವರು ತನ್ನ ಆಲಯದೊಳಗೆ ಇಂತೆಂದನು: “ನಾನು ಅವರಿಗೆ ಶೆಖೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.
7 ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ.
8 ಮೋವಾಬ್ ನನ್ನ ಸ್ನಾನಪಾತ್ರೆ. ಎದೋಮ್ ನನ್ನ ಪಾದರಕ್ಷೆಗಳ ಸ್ಥಳ. ನಾನು ಫಿಲಿಷ್ಟಿಯರನ್ನು ಸೋಲಿಸಿ ಜಯಘೋಷ ಮಾಡುವೆ.”
9 [This verse may not be a part of this translation]
10 [This verse may not be a part of this translation]
11 ದೇವರೇ, ವೈರಿಗಳನ್ನು ಸೋಲಿಸಲು ನಮಗೆ ಸಹಾಯಮಾಡು! ಜನರು ನಮಗೆ ಸಹಾಯಮಾಡಲಾರರು!
12 ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!
×

Alert

×