1
|
ದೇವರೇ, ನನ್ನ ಮೊರೆಯನ್ನು ಕೇಳು. ನನ್ನ ಪ್ರಾರ್ಥನೆಗೆ ಕಿವಿಗೊಡು. |
2
|
ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು. |
3
|
ನೀನೇ ನನ್ನ ಆಶ್ರಯಸ್ಥಾನ; ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು. |
4
|
ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕ ಪಡುತ್ತಿರುವೆ. |
5
|
ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ. |
6
|
ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. ಅವನು ಸದಾಕಾಲ ಜೀವಿಸಲಿ! |
7
|
ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು. |
8
|
ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು. |
Psalms 61:1 Kannada Language Bible Words basic statistical display
COMING SOON ...