Bible Languages

Indian Language Bible Word Collections

Bible Versions

Books

Psalms Chapters

Psalms 63 Verses

Bible Versions

Books

Psalms Chapters

Psalms 63 Verses

1 ರಚನೆಗಾರ : ದಾವೀದ. ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.
2 ಹೌದು, ನಿನ್ನನ್ನು ನಿನ್ನಾಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ.
3 ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ.
4 ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು.
5 ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು.
6 ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.
7 ನಿಜವಾಗಿಯೂ ನೀನೇ ನನಗೆ ಸಹಾಯಕ. ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು.
8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.
9 ನನ್ನನ್ನು ಕೊಲ್ಲಬೇಕೆಂದಿರುವವರು ಪಾತಾಳಕ್ಕೆ ಇಳಿದು ಹೋಗುವರು.
10 ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು.
11 ರಾಜನಾದರೊ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ.

Psalms 63:4 Kannada Language Bible Words basic statistical display

COMING SOON ...

×

Alert

×