Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Psalms Chapters

Psalms 64 Verses

1 ದೇವರೇ, ನನಗೆ ಕಿವಿಗೊಡು. ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ. ನನ್ನ ಪ್ರಾಣವನ್ನು ರಕ್ಷಿಸು.
2 ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.
3 ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.
4 ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.
5 ಕೇಡು ಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.
6 ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.
7 ಆದರೆ ದೇವರು ತನ್ನ “ಬಾಣಗಳನ್ನು” ಎಸೆಯಲು ಇದ್ದಕ್ಕಿದ್ದಂತೆ ದುಷ್ಟರು ಗಾಯಗೊಳ್ಳುವರು.
8 ದುಷ್ಟರು ಬೇರೆಯವರಿಗೆ ಕೇಡು ಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.
9 ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.
10 ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ ಆತನನ್ನೇ ಆಶ್ರಯಿಸಿಕೊಳ್ಳುವರು. ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.
×

Alert

×