Bible Languages

Indian Language Bible Word Collections

Bible Versions

Books

Psalms Chapters

Psalms 65 Verses

Bible Versions

Books

Psalms Chapters

Psalms 65 Verses

1 ದೇವರೇ, ಚೀಯೋನಿನಲ್ಲಿ ನಾವು ನಿನ್ನನ್ನು ಸ್ತುತಿಸುವೆವು. ನಾವು ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆವು.
2 ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.
3 ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ; ನಮ್ಮನ್ನು ಆ ಪಾಪಗಳಿಂದ ಬಿಡಿಸು.
4 ನಿನ್ನ ಸೇವಕರನ್ನು ಆರಿಸಿಕೊಂಡಾತನು ನೀನೇ. ನಿನ್ನಾಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಾತನು ನೀನೇ. ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ.
5 ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.
6 ಸ್ವಬಲದಿಂದ ಪರ್ವತಗಳನ್ನು ನಿರ್ಮಿಸಿದಾತನು ದೇವರೇ. ಆತನು “ಶೌರ್ಯ” ಎಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾನೆ.
7 ಭೋರ್ಗರೆಯುವ ಸಮುದ್ರವನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ.
8 ಭೂಲೋಕದಾದ್ಯಂತದಲ್ಲಿರುವ ಜನರು ನಿನ್ನ ಮಹತ್ಕಾರ್ಯಗಳಿಂದ ಆಶ್ಚರ್ಯಚಕಿತರಾಗಿದ್ದಾರೆ. ಸೂರ್ಯೋದಯವೂ ಸೂರ್ಯಸ್ತಮಾನವೂ ನಮ್ಮನ್ನು ಹರ್ಷಗೊಳಿಸುತ್ತವೆ.
9 ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ.
10 ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ, ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಾತನು ನೀನೇ.
11 ಹೊಸವರ್ಷವನ್ನು ಸಮೃದ್ಧಿಕರವಾದ ಸುಗ್ಗಿಯೊಂದಿಗೆ ಆರಂಭಿಸುವಾತನು ನೀನೇ. ಅನೇಕ ಬೆಳೆಗಳಿಂದ ಬಂಡಿಗಳನ್ನು ತುಂಬಿಸುವಾತನು ನೀನೇ.
12 ಅರಣ್ಯವು ಹುಲ್ಲಿನಿಂದ ಆವೃತವಾಗಿದೆ. ಬೆಟ್ಟಗುಡ್ಡಗಳು ಸಮೃದ್ಧಿಕರ ಫಸಲಿನಿಂದ ಕಂಗೊಳಿಸುತ್ತವೆ.
13 ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ದಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.

Psalms 65:1 Kannada Language Bible Words basic statistical display

COMING SOON ...

×

Alert

×