1
|
ಸರ್ವಭೂನಿವಾಸಿಗಳೇ, ದೇವರಿಗೆ ಜಯಘೋಷ ಮಾಡಿರಿ! |
2
|
ಆತನ ಹೆಸರಿನ ಮಹಿಮೆಯನ್ನು ಕೀರ್ತಿಸಿರಿ. ಸ್ತುತಿಗೀತೆಗಳಿಂದ ಆತನನ್ನು ಸನ್ಮಾನಿಸಿರಿ. |
3
|
ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು. |
4
|
ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ. |
5
|
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಕಾರ್ಯಗಳು ಅತ್ಯದ್ಭುತವಾಗಿವೆ! |
6
|
ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ. |
7
|
ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು. |
8
|
ಜನಾಂಗಗಳೇ, ನಮ್ಮ ದೇವರನ್ನು ಕೊಂಡಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. |
9
|
ನಮಗೆ ಜೀವಕೊಟ್ಟವನು ಆತನೇ. ನಮ್ಮನ್ನು ಕಾಪಾಡುವವನೂ ಆತನೇ. |
10
|
ಜನರು ಬೆಳ್ಳಿಯನ್ನು ಬೆಂಕಿಯಿಂದ ಶೋಧಿಸುವಂತೆ ದೇವರು ನಮ್ಮನ್ನು ಪರೀಕ್ಷಿಸಿದನು. |
11
|
ದೇವರೇ, ನೀನು ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದೆ. ನೀನು ನಮಗೆ ಭಾರದ ಹೊರೆಗಳನ್ನು ಹೊರಿಸಿದೆ; |
12
|
ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ. |
13
|
ಆದ್ದರಿಂದ ನಿನ್ನಾಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. |
14
|
ನಾನು ಇಕ್ಕಟ್ಟಿನಲ್ಲಿದ್ದಾಗ ಸಹಾಯಕ್ಕಾಗಿ ನಿನ್ನನ್ನು ಕೂಗಿಕೊಂಡಾಗ ಮಾಡಿದ ಹರಕೆಗಳನ್ನು ಸಲ್ಲಿಸುವೆನು. |
15
|
ಪಾಪಪರಿಹಾರಕ ಯಜ್ಞಗಳನ್ನು ನಿನಗೆ ಅರ್ಪಿಸುವೆನು; ಟಗರುಗಳನ್ನೂ ಧೂಪವನ್ನೂ ಅರ್ಪಿಸುವೆನು; ಹೋರಿಗಳನ್ನೂ ಹೋತಗಳನ್ನೂ ಅರ್ಪಿಸುವೆನು. |
16
|
ದೇವಭಕ್ತರೆಲ್ಲರೂ ಬನ್ನಿರಿ, ದೇವರು ನನಗೋಸ್ಕರ ಮಾಡಿರುವುದನ್ನು ನಿಮಗೆ ತಿಳಿಸುವೆನು. |
17
|
ನಾನು ಆತನಿಗೆ ಪ್ರಾರ್ಥಿಸಿದೆನು; ಆತನನ್ನು ಸ್ತುತಿಸಿದೆನು. |
18
|
ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು. |
19
|
ದೇವರು ನನ್ನ ಮೊರೆಯನ್ನು ಕೇಳಿದನು; ನನ್ನ ಪ್ರಾರ್ಥನೆಯನ್ನು ಆಲಿಸಿದನು. |
20
|
ದೇವರಿಗೆ ಸ್ತೋತ್ರವಾಗಲಿ! ಆತನು ನನಗೆ ವಿಮುಖನಾಗದೆ, ನನ್ನ ಪ್ರಾರ್ಥನೆಯನ್ನು ಆಲಿಸಿ, ತನ್ನ ಪ್ರೀತಿ ತೋರಿದನು! |
Psalms 66:7 Kannada Language Bible Words basic statistical display
COMING SOON ...