1
|
ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನ ಮುಖದಿಂದ ನಮ್ಮನ್ನು ನೋಡು. |
2
|
ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ. |
3
|
ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! |
4
|
ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ. |
5
|
ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! |
6
|
ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ. |
7
|
ಆತನು ನಮ್ಮನ್ನು ಆಶೀರ್ವದಿಸಲಿ. ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ. |
Psalms 67:5 Kannada Language Bible Words basic statistical display
COMING SOON ...