1
|
ದೇವರೇ, ನನ್ನನ್ನು ರಕ್ಷಿಸು! ನನ್ನ ಬಾಯವರೆಗೂ ನೀರು ಏರಿಬಂದಿದೆ. |
2
|
ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಕಳ್ಳುಸುಬಿನಲ್ಲಿ ಮುಳುಗಿ ಹೋಗುತ್ತಿದ್ದೇನೆ. ನಾನು ಆಳವಾದ ಮಡುವಿವೊಳಕ್ಕೆ ಬಂದಿದ್ದೇನೆ. ಅಲೆಗಳು ನನ್ನ ಸುತ್ತಲೂ ಬಡಿಯುತ್ತಿವೆ. ನಾನು ಮುಳುಗಿಹೋಗುತ್ತಿರುವೆ. |
3
|
ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರು ನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ. |
4
|
ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹುಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು. |
5
|
ದೇವರೇ, ನಾನೇನೂ ತಪ್ಪುಮಾಡಿಲ್ಲವೆಂದು ನಿನಗೆ ಗೊತ್ತಿದೆ. ನನ್ನ ಪಾಪಗಳನ್ನು ನಿನಗೆ ಮರೆಮಾಡಲು ನನ್ನಿಂದಾಗದು. |
6
|
ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ. |
7
|
ನಾಚಿಕೆಯು ನನ್ನ ಮುಖವನ್ನು ಕವಿದಿದೆ. ನಿನಗೋಸ್ಕರವಾಗಿ ಈ ನಾಚಿಕೆಯನ್ನು ಹೊತ್ತುಕೊಂಡಿದ್ದೇನೆ. |
8
|
ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ. ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ. |
9
|
ನಿನ್ನ ಆಲಯಾಭಿಮಾನವು ನನ್ನನ್ನು ದಹಿಸುತ್ತಿದೆ. ನಿನ್ನನ್ನು ಗೇಲಿ ಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ. |
10
|
ನಾನು ಅಳುತ್ತಾ ಉಪವಾಸಮಾಡುವೆನು. ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು. |
11
|
ನಾನು ಶೋಕವಸ್ತ್ರವನ್ನು ಧರಿಸಿಕೊಂಡದ್ದು ಗಾದೆಯ ಮಾತಾಯಿತು. |
12
|
ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು. ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು. |
13
|
ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ: ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು. |
14
|
ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು. |
15
|
ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ. |
16
|
ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು. |
17
|
ನಿನ್ನ ಸೇವಕನಿಗೆ ವಿಮುಖನಾಗಬೇಡ. ನಾನು ಆಪತ್ತಿನಲ್ಲಿದ್ದೇನೆ! ಬೇಗನೆ ನನಗೆ ಸಹಾಯಮಾಡು! |
18
|
ಬಂದು ನನ್ನ ಪ್ರಾಣವನ್ನು ರಕ್ಷಿಸು. ನನ್ನ ಶತ್ರುಗಳಿಂದ ನನ್ನನ್ನು ವಿಮೋಚಿಸು. |
19
|
ನನ್ನ ನಾಚಿಕೆ ನಿನಗೆ ಗೊತ್ತಿದೆ. ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ. ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ. |
20
|
ನಾಚಿಕೆಯು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ. |
21
|
ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ. |
22
|
ಅವರ ಮೇಜಿನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ. |
23
|
ಅವರು ಕುರುಡರಾಗಲಿ; ಅವರ ಬೆನ್ನುಗಳು ಗೂನಾಗಲಿ. |
24
|
ನಿನ್ನ ಕೋಪವನ್ನೆಲ್ಲಾ ಅವರು ಅನುಭವಿಸಲಿ. |
25
|
ಅವರ ಮನೆಗಳು ಬರಿದಾಗಲಿ; ಅವುಗಳಲ್ಲಿ ಯಾರೂ ವಾಸಿಸದಂತಾಗಲಿ. |
26
|
ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು. |
27
|
ಅವರ ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸು. ನಿನ್ನ ರಕ್ಷಣೆಯಲ್ಲಿ ಅವರಿಗೆ ಪಾಲುಕೊಡಬೇಡ. |
28
|
ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ. |
29
|
ನಾನು ನೋವಿನಿಂದ ದುಃಖಗೊಂಡಿರುವೆ. ದೇವರೇ, ನನ್ನನ್ನು ಮೇಲೆತ್ತಿ ರಕ್ಷಿಸು! |
30
|
ನಾನು ದೇವರ ಹೆಸರನ್ನು ಹಾಡಿಕೊಂಡಾಡುವೆನು; ಕೃತಜ್ಞತಾ ಗೀತೆಯೊಂದಿಗೆ ಆತನನ್ನು ಸ್ತುತಿಸುವೆನು. |
31
|
ಇದು ಯೆಹೋವನಿಗೆ ಹೋರಿಗಳ ಸರ್ವಾಂಗ ಹೋಮಕ್ಕಿಂತಲೂ ಬಹು ಪ್ರಿಯವಾದದ್ದು. |
32
|
ದೇವರನ್ನು ಆರಾಧಿಸಲು ಬಂದ ಬಡವರೇ, ಇದನ್ನು ಕೇಳಿ ಹರ್ಷಿಸಿರಿ. |
33
|
ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ. |
34
|
ಭೂಮ್ಯಾಕಾಶಗಳೇ, ಸಮುದ್ರವೇ, ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ! |
35
|
ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು! |
36
|
ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು. |
Psalms 69:1 Kannada Language Bible Words basic statistical display
COMING SOON ...