Indian Language Bible Word Collections
Psalms 7:5
Psalms Chapters
Psalms 7 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 7 Verses
1
|
ರಚನೆಗಾರ : ದಾವೀದ. ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು! |
2
|
ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು. |
3
|
ನನ್ನ ದೇವರಾದ ಯೆಹೋವನೇ, ನಾನು ಯಾವ ಅಪರಾಧವನ್ನಾದರೂ ಮಾಡಿದ್ದರೆ, |
4
|
ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ, |
5
|
ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ. |
6
|
ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು! |
7
|
ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತ ಸ್ಥಾನದಲ್ಲಿ ಆಸೀನನಾಗು. |
8
|
ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು. |
9
|
ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ. |
10
|
ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು. |
11
|
ದೇವರು ನೀತಿವಂತನಾದ ನ್ಯಾಯಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು. |
12
|
ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ. |
13
|
ದುಷ್ಟರನ್ನು ಶಿಕ್ಷಿಸಲು ಆತನು ಸಿದ್ಧನಾಗಿದ್ದಾನೆ. |
14
|
ಕೆಲವರು ದುಷ್ಟಕಾರ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು. |
15
|
ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡು ಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು. |
16
|
ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು. |
17
|
ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು |