1
|
ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪು ನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು. |
2
|
ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿ ತೀರ್ಪುಮಾಡಲು ಅವನಿಗೆ ಸಹಾಯಮಾಡು. |
3
|
ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ. |
4
|
ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡು ಮಾಡುವವರನ್ನು ರಾಜನು ದಂಡಿಸಲಿ. |
5
|
ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ. |
6
|
ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು. |
7
|
ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ. |
8
|
ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ. |
9
|
ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ. |
10
|
ತಾರ್ಷೀಷ್ನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಗಳನ್ನು ಸಲ್ಲಿಸಲಿ. |
11
|
ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ. |
12
|
ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು. |
13
|
ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು. |
14
|
ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ. |
15
|
ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ. |
16
|
ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿವಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ. |
17
|
ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಆವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ. |
18
|
ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು! |
19
|
ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್! |
20
|
ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯಗೊಂಡವು. |
Psalms 72:1 Kannada Language Bible Words basic statistical display
COMING SOON ...