1
|
ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ? |
2
|
ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ. |
3
|
ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ. |
4
|
ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು. |
5
|
ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ ಕಳೆ ಕೀಳುತ್ತಿರುವ ಜನರಂತಿದ್ದಾರೆ. |
6
|
ನಿನ್ನಾಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು. |
7
|
ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ! |
8
|
ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು. |
9
|
ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ. |
10
|
ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರುಬೇಕು? ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ? |
11
|
ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ! |
12
|
ದೇವರೇ, ಬಹುಕಾಲದಿಂದ ನೀನು ನಮ್ಮರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲ್ಲು ನೀನು ನಮಗೆ ಸಹಾಯಮಾಡಿದೆ. |
13
|
ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ. |
14
|
ಲಿವ್ಯಾತಾನನ ತಲೆಗಳನ್ನು ಜಜ್ಜಿ ಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ. |
15
|
ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ. |
16
|
ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ. |
17
|
ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. ಬೇಸಿಗೆಕಾಲವನ್ನೂ ಚಳಿಕಾಲವನ್ನೂ ನಿರ್ಮಿಸಿದಾತನು ನೀನೇ. |
18
|
ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ. |
19
|
ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. ನಿನ್ನ ಬಡಜನರನ್ನು ಮರತೇ ಬಿಡಬೇಡ. |
20
|
ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ. |
21
|
ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. ಅವರಿಗೆ ಕೇಡಾಗಲು ಬಿಡಬೇಡ. ನಿನ್ನ ಬಡಜನರೂ ನಿಸ್ಸಹಾಯಕರೂ ನಿನ್ನನ್ನು ಕೊಂಡಾಡಲಿ. |
22
|
ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ! |
23
|
ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು. |
Psalms 74:1 Kannada Language Bible Words basic statistical display
COMING SOON ...