1
|
ರಚನೆಗಾರ : ಆಸಾಫ. ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ. |
2
|
ದೇವರು ಇಂತೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನೀತಿಯಿಂದಲೇ ತೀರ್ಪುಕೊಡುವೆ. |
3
|
ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.” |
4
|
[This verse may not be a part of this translation] |
5
|
[This verse may not be a part of this translation] |
6
|
ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು. |
7
|
ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು. |
8
|
ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು! |
9
|
ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು. |
10
|
ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು. |
Psalms 75:1 Kannada Language Bible Words basic statistical display
COMING SOON ...