1
|
ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು. |
2
|
ಆತನ ಬೀಡಾರವು ಸಾಲೇಮಿನಲ್ಲಿದೆ. ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ. |
3
|
ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ. |
4
|
ದೇವರೇ, ಶತ್ರುಗಳನ್ನು ಸೋಲಿಸಿ ಬೆಟ್ಟಗಳಿಂದ ಇಳಿದು ಬರುವಾಗ ನೀನು ತೇಜೋಮಯನಾಗಿರುವೆ. |
5
|
ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ. |
6
|
ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು. |
7
|
ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು? |
8
|
ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು. |
9
|
ದೇವರು ಲೋಕದ ದೀನರನ್ನು ರಕ್ಷಿಸಿದನು. ಆತನು ಪರಲೋಕದಿಂದ ತೀರ್ಮಾನ ನೀಡುತ್ತಿರಲು ಭೂಲೋಕವೆಲ್ಲಾ ಭಯದಿಂದ ಸ್ತಬ್ಧವಾಯಿತು. |
10
|
ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು. |
11
|
ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ. |
12
|
ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು. |
Psalms 76:10 Kannada Language Bible Words basic statistical display
COMING SOON ...