1
|
ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು. ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು. |
2
|
ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ. |
3
|
ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗದು. |
4
|
ನೀನು ನನಗೆ ನಿದ್ರೆಮಾಡಗೊಡಿಸಲಿಲ್ಲ. ನಾನು ಬಹು ಗಲಿಬಿಲಿಗೊಂಡಿದ್ದರಿಂದ ನಿನ್ನೊಂದಿಗೆ ಮಾತಾಡಲಾಗಲಿಲ್ಲ. |
5
|
ಹಿಂದಿನಕಾಲದ ಬಗ್ಗೆ ಯೋಚಿಸತೊಡಗಿದೆನು. ಬಹುಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ಯೋಚಿಸತೊಡಗಿದೆನು. |
6
|
ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು. |
7
|
ನಾನು ಆಶ್ಚರ್ಯದಿಂದ ಹೀಗಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ? |
8
|
ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ? |
9
|
ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?” |
10
|
ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “‘ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?’ ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ” |
11
|
ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. ಬಹುಕಾಲದ ಹಿಂದೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು. |
12
|
ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಕಾರ್ಯಗಳ ಕುರಿತಾಗಿ ಆಲೋಚಿಸುವೆನು. |
13
|
ದೇವರೇ, ನಿನ್ನ ಮಾರ್ಗಗಳು ಪರಿಶುದ್ಧವಾಗಿವೆ. ದೇವರೇ, ನಿನ್ನಂತೆ ಮಹತ್ವವುಳ್ಳವರು ಬೇರೆ ಯಾರೂ ಇಲ್ಲ. |
14
|
ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ. ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ. |
15
|
ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ. ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ. |
16
|
ದೇವರೇ, ನಿನ್ನನ್ನು ಕಂಡು ಜಲರಾಶಿಗಳು ಭಯಗೊಂಡವು. ಆಳವಾದ ನೀರು ಭಯದಿಂದ ನಡುಗಿತು. |
17
|
ದಟ್ಟವಾದ ಕಪ್ಪುಮೋಡಗಳು ಮಳೆಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು. |
18
|
ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು. ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು. ಭೂಮಿಯು ಅಲ್ಲಾಡಿ ಕಂಪಿಸಿತು. |
19
|
ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ. |
20
|
ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಪ್ರಜೆಯನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ. |
Psalms 77:14 Kannada Language Bible Words basic statistical display
COMING SOON ...