1
|
ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ; ನನ್ನ ನುಡಿಗಳನ್ನು ಲಾಲಿಸಿರಿ. |
2
|
ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು. |
3
|
ನಾವು ಅವುಗಳನ್ನು ಕಿವಿಯಾರೆ ಕೇಳಿದ್ದೇವೆ. ನಮ್ಮ ಪೂರ್ವಿಕರೇ ಅವುಗಳನ್ನು ನಮಗೆ ಹೇಳಿದರು. |
4
|
ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು. |
5
|
ಆತನು ಯಾಕೋಬನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಇಸ್ರೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಆತನು ನಮ್ಮ ಪೂರ್ವಿಕರಿಗೆ ಆಜ್ಞೆಗಳನ್ನು ಕೊಟ್ಟನು. ನಿಮ್ಮ ಸಂತತಿಗಳವರಿಗೆ ಧರ್ಮಶಾಸ್ತ್ರವನ್ನು ಉಪದೇಶಿಸಿರಿ ಎಂದು ಆತನು ನಮ್ಮ ಪೂರ್ವಿಕರಿಗೆ ಹೇಳಿದನು. |
6
|
ಹೊಸ ತಲೆಮಾರುಗಳವರು ಬೆಳೆದು ದೊಡ್ಡವರಾದಾಗ ತಮ್ಮ ಮಕ್ಕಳಿಗೆ ಅವುಗಳನ್ನು ಹೇಳಿಕೊಡುವರು. ಹೀಗೆ ಜನರು ಕೊನೆಯ ತಲೆಮಾರಿನವರೆಗೊ ಧರ್ಮಶಾಸ್ತ್ರವನ್ನು ತಿಳಿದಿರುವರು. |
7
|
ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು. |
8
|
ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. |
9
|
ಎಫ್ರಾಯಿಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿಹೋದರು. |
10
|
ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ. |
11
|
ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ ಎಫ್ರಾಯಿಮಿನ ಜನರು ಮರೆತುಬಿಟ್ಟರು. |
12
|
ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ ದೇವರು ತನ್ನ ಮಹಾಶಕ್ತಿಯನ್ನು ತೋರಿಸಿದನು. |
13
|
ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು. |
14
|
ಹಗಲಿನಲ್ಲಿ ಮೋಡದಿಂದಲೂ ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡಿಸಿದನು. |
15
|
ದೇವರು ಅರಣ್ಯದಲ್ಲಿ ಬಂಡೆಯನ್ನು ಸೀಳಿ ಅವರಿಗೆ ಸಾಗರದಿಂದಲೋ ಎಂಬಂತೆ ನೀರನ್ನು ಸಮೃದ್ಧಿಕರವಾಗಿ ಒದಗಿಸಿದನು. |
16
|
ಆತನು ಬಂಡೆಯಿಂದ ನೀರನ್ನು ನದಿಯಂತೆ ಬರಮಾಡಿದನು. |
17
|
ಆದರೂ ಅವರು ಅರಣ್ಯದಲ್ಲಿ ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು. |
18
|
ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು ಇಷ್ಟಪದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು. |
19
|
ಅವರು ಆತನಿಗೆ ವಿರೋಧವಾಗಿ ಮಾತಾಡಿ, “ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ? |
20
|
ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು. |
21
|
ಆ ಜನರು ಹೇಳಿದ್ದನ್ನು ಕೇಳಿ ಯೆಹೋವನು ಕೋಪಗೊಂಡನು. ಆತನು ಯಾಕೋಬ್ಯರ ಮೇಲೆಯೂ ಇಸ್ರೇಲರ ಮೇಲೆಯೂ ಕೋಪಗೊಂಡನು. |
22
|
ಯಾಕಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ. |
23
|
ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು. |
24
|
ಆಕಾಶದ ದ್ವಾರಗಳು ತೆರೆದು ಆಕಾಶದ ಉಗ್ರಾಣದಿಂದ ಧಾನ್ಯವು ಸುರಿದಂತೆ ಮನ್ನವು ಸುರಿಯಿತು. |
25
|
ಜನರು ದೇವದೂತರ ಆಹಾರವನ್ನು ತಿಂದರು. ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು. |
26
|
ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು. |
27
|
ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು. |
28
|
ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ, ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು. |
29
|
ಅವರಿಗೆ ತಿನ್ನಲು ಹೇರಳವಾಗಿತ್ತು. ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು. |
30
|
ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು. |
31
|
ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ದೃಢಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು. |
32
|
ಆದರೂ ಅವರು ಪಾಪಮಾಡುತ್ತಾ ಬಂದರು. ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು. |
33
|
ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು. |
34
|
ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು. |
35
|
ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು. |
36
|
ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು. |
37
|
ಅವರ ಹೃದಯಗಳು ಆತನಲ್ಲಿ ನಲೆಗೊಂಡಿರಲಿಲ್ಲ. ಆತನ ಒಡಂಬಡಿಕೆಗೆ ನಂಬಿಗಸ್ತರಾಗಿರಲಿಲ್ಲ. |
38
|
ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು. |
39
|
ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. ಜನಾರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ. |
40
|
ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆಎದ್ದರು. ಆತನನ್ನು ಬಹಳವಾಗಿ ನೋಯಿಸಿದರು. |
41
|
ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು. |
42
|
ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು. |
43
|
ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು. |
44
|
ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ. |
45
|
ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕಪ್ಪೆಗಳನ್ನು ಕಳುಹಿಸಿದನು; ಆವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು. |
46
|
ಅತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು. |
47
|
ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆಸುರಿಸಿದನು; ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು. |
48
|
ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು. |
49
|
ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತನನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು. |
50
|
ಆತನು ತನ್ನ ಕೋಪವನ್ನು ತೋರಿಸಿದನು. ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು. |
51
|
ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು. |
52
|
ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು. ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು. |
53
|
ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ ಸುರಕ್ಷಿತವಾಗಿ ಮುನ್ನಡೆಸಿದನು. ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು. |
54
|
ಆತನು ತನ್ನ ಜನರನ್ನು ತನ್ನ ಪವಿತ್ರನಾಡಿಗೂ ತನ್ನ ಭುಜಬಲದಿಂದ ತೆಗೆದುಕೊಂಡ ಪರ್ವತಕ್ಕೂ ನಡೆಸಿದನು. |
55
|
ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು. |
56
|
ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. |
57
|
ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು. |
58
|
ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಅತನನ್ನು ರೇಗಿಸಿದರು. |
59
|
ದೇವರು ಇದನ್ನು ತಿಳಿದು ಬಹು ಕೋಪಗೊಂಡನು, ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು! |
60
|
ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ. |
61
|
ಆತನು ತನ್ನ ಜನರನ್ನು ಇತರ ಜನಾಂಗಗಳ ವಶಕ್ಕೆ ಕೊಟ್ಟನು. ಶತ್ರುಗಳು ಆತನ “ಸುಂದರವಾದ ಆಭರಣವನ್ನು” ತೆಗೆದುಕೊಂಡರು. |
62
|
ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು. |
63
|
ಯುವಕರು ಬೆಂಕಿಯ ಪಾಲಾದರು. ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ. |
64
|
ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು. ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ. |
65
|
ಕೊನೆಗೆ, ನಿದ್ದೆಯಿಂದ ಎಚ್ಚರಗೊಳ್ಳುತ್ತಿರುವ ಮನುಷ್ಯನಂತೆಯೂ ಅಮಲಿಳಿದು ಎಚ್ಚರಗೊಳ್ಳುತ್ತಿರುವ ಸೈನಿಕನಂತೆಯೂ ನಮ್ಮ ಯೆಹೋವನು ಎದ್ದನು. |
66
|
ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು. |
67
|
ಆದರೆ ಆತನು ಯೋಸೇಫನ ಕುಲವನ್ನು ತಿರಸ್ಕರಿಸಿದನು. ಎಫ್ರಾಯೀಮನ ಕುಲವನ್ನೂ ಆತನು ಆರಿಸಿಕೊಳ್ಳಲಿಲ್ಲ. |
68
|
ಅತನು ಯೆಹೂದಕುಲವನ್ನೇ ಆರಿಸಿಕೊಂಡನು ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು. |
69
|
ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ ಅದನ್ನು ಭೂಮಿಯಂತೆ ಶಾಶ್ವತಗೊಳಿಸಿದನು. |
70
|
ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು. |
71
|
ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು. |
72
|
ದಾವೀದನು ಯಥಾರ್ಥಹೃದಯದಿಂದಲೂ ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು. |
Psalms 78:49 Kannada Language Bible Words basic statistical display
COMING SOON ...