1
|
ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು. |
2
|
ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ. |
3
|
ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು. |
4
|
ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು? ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು? ಮನುಷ್ಯರು ಎಷ್ಟರವನು? ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು? |
5
|
ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ. |
6
|
ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ. |
7
|
ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು. |
8
|
ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು. |
9
|
ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ. |
Psalms 8:3 Kannada Language Bible Words basic statistical display
COMING SOON ...