1
|
ರಚನೆಗಾರ : ಆಸಾಫ. ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ. |
2
|
ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು. |
3
|
ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು! |
4
|
ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ? |
5
|
ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ. |
6
|
ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು. |
7
|
ಸೇನಾಧೀಶ್ವರನಾದ ಯೆಹೋವನೇ, ನಮ್ಮನ್ನು ಮತ್ತೆ ಸ್ವೀಕರಿಸು. ನಮ್ಮನ್ನು ಸ್ವೀಕರಿಸು. ನಮ್ಮನ್ನು ರಕ್ಷಿಸು. |
8
|
ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ. |
9
|
“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು. |
10
|
ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು. |
11
|
ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು. ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು. |
12
|
ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು. |
13
|
ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ. |
14
|
ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು. |
15
|
ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. ನೀನು ಬೆಳೆಸಿದ ಎಳೆಸಸಿಯನ್ನು ನೋಡು. |
16
|
ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ. |
17
|
ನಿನ್ನ ಬಲಗಡೆಯಲ್ಲಿ ನಿಂತಿರುವ ನಿನ್ನ ಮಗನ ಕಡೆಗೆ ಕೈಚಾಚು. ನೀನು ಬೆಳೆಸಿದ ಮಗನ ಕಡೆಗೆ ಕೈಚಾಚು. |
18
|
ಅವನು ನಿನ್ನನ್ನು ಮತ್ತೆ ತ್ಯಜಿಸುವುದಿಲ್ಲ. ಅವನು ಬದುಕಲಿ, ಆಗ ಅವನು ನಿನ್ನ ಹೆಸರನ್ನು ಆರಾಧಿಸುವನು. |
19
|
ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮ ಬಳಿಗೆ ಹಿಂತಿರುಗಿ ಬಾ, ನಮ್ಮನ್ನು ಸ್ವೀಕರಿಸು. ನಮ್ಮನ್ನು ರಕ್ಷಿಸು. |
Psalms 80:1 Kannada Language Bible Words basic statistical display
COMING SOON ...