Bible Languages

Indian Language Bible Word Collections

Bible Versions

Books

Psalms Chapters

Psalms 83 Verses

Bible Versions

Books

Psalms Chapters

Psalms 83 Verses

1 ರಚನೆಗಾರ : ಆಸಾಫ. ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು.
2 ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ. ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.
3 ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.
4 ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ “ಇಸ್ರೇಲ್” ಎಂಬ ಹೆಸರೇ ಅಳಿದು ಹೋಗುವುದು.”
5 ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ.
6 [This verse may not be a part of this translation]
7 [This verse may not be a part of this translation]
8 ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.
9 ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.
10 ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.
11 ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚೆಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
12 ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟ ಬೇಕೆಂದಿದ್ದರು.
13 ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.
14 ಕಾಡನ್ನು ನಾಶಮಾಡುವ ಬೆಂಕಿಯಂತೆಯೂ ಬೆಟ್ಟಗಳನ್ನು ಸುಟ್ಟುಹಾಕುವ ಕಾಳ್ಗಿಚ್ಚಿನಂತೆಯೂ ಅವರನ್ನು ನಾಶಮಾಡು.
15 ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು.
16 ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.
17 ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ. ಅವರು ಅವಮಾನಗೊಂಡು ನಾಶವಾಗಲಿ.
18 ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.

Psalms 83:1 Kannada Language Bible Words basic statistical display

COMING SOON ...

×

Alert

×