1
|
ರಚನೆಗಾರ : ಆಸಾಫ. ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು. |
2
|
ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ. ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ. |
3
|
ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ. |
4
|
ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ “ಇಸ್ರೇಲ್” ಎಂಬ ಹೆಸರೇ ಅಳಿದು ಹೋಗುವುದು.” |
5
|
ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ. |
6
|
[This verse may not be a part of this translation] |
7
|
[This verse may not be a part of this translation] |
8
|
ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ. |
9
|
ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು. |
10
|
ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು. |
11
|
ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚೆಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. |
12
|
ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟ ಬೇಕೆಂದಿದ್ದರು. |
13
|
ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು. |
14
|
ಕಾಡನ್ನು ನಾಶಮಾಡುವ ಬೆಂಕಿಯಂತೆಯೂ ಬೆಟ್ಟಗಳನ್ನು ಸುಟ್ಟುಹಾಕುವ ಕಾಳ್ಗಿಚ್ಚಿನಂತೆಯೂ ಅವರನ್ನು ನಾಶಮಾಡು. |
15
|
ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು. |
16
|
ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು. |
17
|
ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ. ಅವರು ಅವಮಾನಗೊಂಡು ನಾಶವಾಗಲಿ. |
18
|
ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು. |
Psalms 83:13 Kannada Language Bible Words basic statistical display
COMING SOON ...