1
|
ಸೇನಾಧೀಶ್ವರನಾದ ಯೆಹೋವನೇ, ನಿನ್ನ ಆಲಯವು ಎಷ್ಟೋ ರಮ್ಯವಾಗಿದೆ. |
2
|
ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ. |
3
|
ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡುಕಟ್ಟಿಕೊಂಡು ಮರಿಮಾಡುತ್ತವೆ. |
4
|
ನಿನ್ನಾಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! ಅವರು ನಿನ್ನನ್ನು ನಿತ್ಯವು ಸ್ತುತಿಸುತ್ತಲೇ ಇರುವರು. |
5
|
ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು. |
6
|
ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. ಮುಂಗಾರು ಮಳೆಯು ಅದನ್ನು ನೀರಿನ ಕೊಳ್ಳಗಳಿಂದ ಸಮೃದ್ಧಿಗೊಳಿಸುವುದು. |
7
|
ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು. |
8
|
ಸೇನಾಧೀಶ್ವರ ಯೆಹೋವದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು. |
9
|
ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನೀನು ಅಭಿಷೇಕಿಸಿದವನಿಗೆ ಕರುಣೆತೋರು. |
10
|
ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನಾಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ. |
11
|
ಯೆಹೋವದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು. |
12
|
ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ! |
Psalms 84:5 Kannada Language Bible Words basic statistical display
COMING SOON ...