ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ.
ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ. [*ದುಷ್ಟರ … ಉತ್ತಮ ಅಥವಾ “ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲ ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುವುದೇ ಉತ್ತಮ.”]
ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. [†ಸಂರಕ್ಷಕನೂ … ರಾಜನೂ ಆಗಿದ್ದಾನೆ ಅಕ್ಷರಶಃ, “ಸೂರ್ಯ ಮತ್ತು ಗುರಾಣಿ.”] ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.